11.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿ, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹೆಚ್ಚಿನ ಕಡೆಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಚಂಡಮಾರುತ ಮಾಚ: ಈಗಾಗಲೇ ಬಂಗಾಳಕೊಲ್ಲಿಯ ಶ್ರೀಲಂಕಾ ಹಾಗೂ ಅಂಡಮಾನ್ ಮಧ್ಯ ಉಂಟಾಗಿರುವ ವಾಯುಭಾರ ಕುಸಿತವು ಬಲಗೊಳ್ಳುತ್ತಿದ್ದು, ಮೇ 13ರಂದು ಮ್ಯಾನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ.
ರಾಜ್ಯದ ಮಲೆನಾಡು ಹಾಗೂ ಕರಾವಳಿಯ ಈಗಿನ ಮಳೆಯ ಪ್ರಮಾಣವು ಇನ್ನೆರಡು ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ. ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡ ವಾತಾವರಣ ಇರಲಿದ್ದು ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
No comments:
Post a Comment