Advertise

11 May 2023

12.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿಯ ಅಲ್ಲಲ್ಲಿ, ಉತ್ತರ ಕನ್ನಡ, ಗೋವಾ ಗಡಿಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ 

ಕೊಡಗು, ಚಿಕ್ಕಮಗಳೂರು, ಹಾಸನ, ಉತ್ತಮ ಮಳೆಯ ಮುನ್ಸೂಚನೆ ಇದ್ದರೆ ಮೈಸೂರು, ಮಂಡ್ಯ, ಶಿವಮೊಗ್ಗ ಅಲ್ಲಲ್ಲಿ ಹಾಗೂ ತುಮಕೂರಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಚಂಡಮಾರುತ ಮೋಚಾ : ಮೇ 13ರ ತಡ ರಾತ್ರಿ ಮ್ಯಾನ್ಮಾರ್ ಗೆ ಅಪ್ಪಳಿಸುವ ಮುನ್ಸೂಚನೆ ಇದೆ. 
ನಾಳೆಯಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 




No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...