Advertise

15 May 2023

16.05.2023 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಮಳೆಯ ಸಾಧ್ಯತೆ ಕಡಿಮೆ ಇದ್ದರೂ ಅನಿರೀಕ್ಷಿತವಾಗಿ ಅಲ್ಲಲ್ಲಿ ತುಂತುರು ಒಂದೆರಡು ಸಾಮಾನ್ಯ ಮಳೆಯಾಗಬಹುದು. 

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

ಮುಂಗಾರು : ಈಗಿನ ಮುನ್ಸೂಚನೆಯಂತೆ ಜೂನ್ ಮೊದಲವಾರದಲ್ಲಿ ಮುಂಗಾರು ಆಗಮನದ ನಿರೀಕ್ಷೆ ಇದೆ. 
ಆದರೆ ಈಗಿನ ಕನ್ಯಾಕುಮಾರಿಗೆ ನೇರವಾಗಿ ಭೂ ಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಉಂಟಾಗಿದ್ದು ಮುಂಗಾರು ಚಲನೆಗೆ ತೊಡಕಾಗಿದೆ. ಅದು ದಕ್ಷಿಣ ಆಫ್ರಿಕಾ ಖಂಡದ ಕರಾವಳಿ ಕಡೆ ಚಲಿಸುತ್ತಿದ್ದರೂ ಸಮಯ ತೆಗೆದುಕೊಳ್ಳುವ ಲಕ್ಷಣಗಳಿವೆ. 
ಈಗಿನಂತೆ ಮೇ 24ರಿಂದ ಕೇರಳದ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗುವ ಮುನ್ಸೂಚನೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...