16 May 2023

17.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕಾರ್ಕಳ ಸುತ್ತಮುತ್ತ ಸಾಧ್ಯತೆ ಹೆಚ್ಚಿದೆ. 

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಮೂಡಿಗೆರೆ, ಶಿೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಮೈಸೂರು, ಹಾಸನ, ಉಳಿದ ಚಿಕ್ಕಮಗಳೂರು, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಅಲ್ಲಲ್ಲಿ ಮೋಡದ ವಾತಾವರಣದ ಇದ್ದು, ಮಳೆಯ ಮುನ್ಸೂಚನೆ ಇರುವುದಿಲ್ಲ. 

ಮುಂಗಾರು : ಹಿಂದೂಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮುಂಗಾರನ್ನು ಅನಿಶ್ಚಿತತೆಗೆ ದೂಡುವ ಲಕ್ಷಣಗಳಿವೆ. 

No comments:

Post a Comment