Advertise

18 May 2023

19.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


19.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. 

ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣ ಇರಬಹುದು.
ಉಷ್ಣಾಂಶ ಏರಿಕೆಯಿಂದಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಮುಂಗಾರು : IMD ಮಾಹಿತಿಯಂತೆ ಜೂನ್ 4 (+-4)ರಂದು ಮುಂಗಾರು ಕೇರಳಕ್ಕೆ ಪ್ರವೇಶಿಸಲಿದೆ.
ಕಳೆದ ವರ್ಷ 2022 ರ ಮೇ ಇದೇ ಸಮಯದಲ್ಲಿ ಮುಂಗಾರು ಪ್ರಭಲವಾಗಿ ದಕ್ಷಿಣ ಕೇರಳ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿ ಕೇರಳ ಹಾಗೂ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗಿತ್ತು. 
ಆದರೆ ಈ ಸಲ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ಚಂಡಮಾರುತ ಈಗ ಶಿಥಿಲಗೊಳ್ಳುತ್ತಿದ್ದರೂ ಮುಂಗಾರು ಮುಂದೆ ಚಲಿಸಲು ತೊಡಕಾಗಿದೆ.
ಆದರೂ ಕೇರಳದಲ್ಲಿ ಮುಂಗಾರು ಪೂರ್ವ ಮಳೆಯ ಪುನಃ ಆರಂಭಗೊಂಡಿದ್ದು ರಾಜ್ಯದಲ್ಲೂ ಮೇ 20ರ ನಂತರ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...