Advertise

19 May 2023

20.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ 

ಕೊಡಗು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ( ಗುಡುಗು, ಗಾಳಿ ಸಹಿತ). 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಸ್ಥಿತಿ :  IMDಯವರ ಮಾಹಿತಿಯಂತೆ ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಮುಂಗಾರು ಅಂಡಮಾನ್ ನಿಕೋಬಾರ್ ತಲಪುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಇನ್ನೆರಡು ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ಮುಂಗಾರು ರೀತಿಯ ಭಾರಿ ಮಳೆಯ ಮುನ್ಸೂಚನೆ ಇದೆ. 
ಭೂ ಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮದಿಂದ ರಾಜ್ಯಕ್ಕೆ ಮುಂಗಾರು ಪ್ರವೇಶದ ಅನಿಶ್ಚಿತತೆ ಮುಂದುವರಿಯಲಿದೆ. 
ಆದರೂ ರಾಜ್ಯದಲ್ಲಿ ಮುಂಗಾರು ಪೂರ್ವ ಗುಡುಗು ಸಹಿತ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...