Advertise

22 May 2023

23.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಮೋಡದ ವಾತಾವರಣ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಮೂಡಬಿದರೆ, ಪಡುಬಿದ್ರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪಾತ್ರ ಮಹತ್ವದ್ದು. ಗಾಳಿಯ ವೇಗ ಹೆಚ್ಚಿದ್ದರೆ ದ. ಕ. ಉಡುಪಿ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ, ಹೊಸನಗರ, ಸಾಗರ (ಶರಾವತಿ ನದಿ ಪಾತ್ರದ ಸುತ್ತಮುತ್ತ) ಮಳೆಯ ಮುನ್ಸೂಚನೆ ಇದೆ. 

ಮೈಸೂರು ಒಂದೆರಡು ಕಡೆ, ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿ, ಬಾಗಲಕೋಟೆ, ವಿಜಾಪುರ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಹಗಲಿನ ಉಷ್ಣಾಂಶ ಏರಿಕೆಯಿಂದಾಗಿ ಈಗನ ಈ ಮುಂಗಾರು ಪೂರ್ವ ಮಳೆಯು ಭಾರಿ ಗಾಳಿಯು ಒಳಗೊಂಡಿರುವುದರಿಂದ ಮಳೆಯ ವ್ಯಾಪ್ತಿಯಲ್ಲಿ ಬದಲಾಗುತ್ತಿದೆ. 

ಗಾಳಿಯ ಬಗ್ಗೆ ಎಚ್ಚರವಿರಲಿ 

ಮುಂಗಾರು ಸ್ಥಿತಿ : ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಮುಂಗಾರು ತಾರ್ತಿಕವಾಗಿ ಆರಂಭಗೊಂಡಿದ್ದರೂ,  ಹಿಂದೂ ಮಹಾಸಾಗರದಲ್ಲಿಯ ಈಗಿನ ವಾಯುಭಾರ ಕುಸಿತವು ಮೇ 26ರ ಒಳಗಾಗಿ ಕ್ಷೀಣಿಸಲಿದ್ದು ಆಮೇಲೆ ಅಂಡಮಾನ್ ಕಡೆಯಿಂದ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...