Advertise

23 May 2023

24.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ, ಉಡುಪಿ, ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು ಉತ್ತಮ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಗಾಳಿಯ ಪ್ರಭಲವಾಗಿದ್ದರೆ ಕರಾವಳಿಯ ಹಲವೆಡೆ ಮಳೆಯ ಸಾಧ್ಯತೆ ಇದೆ 

ಉಳಿದ ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ದಾವಣಗೆರೆ, ಬಾಗಲಕೋಟೆ, ಚಿತ್ರದುರ್ಗ, ಪಾವಗಡ, ಬಳ್ಳಾರಿ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಇವತ್ತು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಮೋಡ ಕವಿದ ವಾತಾವರಣ ಇರಲಿದ್ದು ಗಾಳಿಯ ಪ್ರಭಾವದಿಂದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಮುಂಗಾರು ಸ್ಥಿತಿ : ಹಿಂದೂಮಹಾಸಾಗರದಲ್ಲಿಯ ವಾಯುಭಾರ ಕುಸಿತವು ಕ್ಷೀಣಿಸುತ್ತಿದ್ದ ಹಾಗೆ ಮುಂಗಾರು ಸ್ವಲ್ಪ ಬಲಗೊಳ್ಳುವ ಲಕ್ಷಣಗಳಿವೆ. 
ಜೂನ್ 1ರಂದು ಕೇರಳಕ್ಕೆ ಆಗಮಿಸರುವ
ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ತನಕ ಈಗಿನ ಗುಡುಗು ಸಿಡಿಲು ಸಹಿತ ಮಳೆ ಮುಂದುವರಿಯಲಿದೆ. 

No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...