25.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡದ, ಸುಳ್ಯ, ಪುತ್ತೂರು, ವಿಟ್ಲ, ಬಂಟ್ವಾಳ, ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ, ಚಿಕ್ಕಮಗಳೂರು, ಹಾಸನ ಹೆಚ್ಚಿನ ಭಾಗಗಳಲ್ಲಿ ತುಮಕೂರು, ಚಿತ್ರದುರ್ಗ ಹಾಗೂ ಮೈಸೂರು ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ಸಹ ಮಳೆಯ ಮುನ್ಸೂಚನೆ ಇದೆ.
ಗಾಳಿಯ ಪಾತ್ರ ಪ್ರಮುಖವಾಗಿದೆ. ಗಾಳಿಯ ಬಗ್ಗೆ ಎಚ್ಚರವಿರಲಿ
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಮುಂಗಾರು ಸ್ಥಿತಿ : ಇವತ್ತು, ನಾಳೆಯಲ್ಲಿ ಹಿಂದೂಮಹಾಸಾಗರದ ವಾಯುಭಾರ ಕುಸಿತವು ಶಿಥಿಲಗೊಳ್ಳಲಿದ್ದು ಅಂಡಮಾನಿಂದ ಮುಂಗಾರು ಮುಂದುವರಿಯಲು ವೇದಿಕೆ ಸಜ್ಜಾಗಲಿದೆ.
ಜೂನ್ 1ರಿಂದ ಕೇರಳ ಕರಾವಳಿಯಾದ್ಯಂತ ಮುಂಗಾರು ಮಳೆಯ ಮುನ್ಸೂಚನೆ ಇದೆ.
ಮಂಗಳೂರುನಲ್ಲಿ 24ರ ರಾತ್ರಿ ಉತ್ತಮ ಮಳೆ ಆಗಿದೆ
ReplyDelete