26.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. (ಮುನ್ಸೂಚನೆ ಪ್ರಕಾರ ತುಂತುರು ಮಳೆ)
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ರೀತಿಯ ಮೋಡದ ಚಲನೆ ಪ್ರಾರಂಭವಾಗುರುವುದರಿಂದ ಕರಾವಳಿಗೆ ಇನ್ನು ಪೂರ್ವ ಮುಂಗಾರು ಮಳೆ ಮುಗಿದಂತೆಯೆ. ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸುವ ಲಕ್ಷಣಗಳಿವೆ. ಆದರೂ ಇವತ್ತಿನಿಂದ ಕಾಸರಗೋಡು, ದಕ್ಷಿಣ ಕನ್ನಡದ ಅಲ್ಲಲ್ಲಿ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಅನಿರೀಕ್ಷಿತವಾಗಿ ಮುಂಗಾರು ರೀತಿಯ ಮಳೆಯ ಸಾಧ್ಯತೆ ಇದೆ.
ಆರಂಭಕ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ
ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. (ತಾಪಮಾನ ಏರಿಕೆಯಿಂದ ಮುನ್ಸೂಚನೆಗೆ ಸಿಗದೆ ಅಲ್ಲಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.)
ಮುಂಗಾರು : ಮುಂಗಾರು ಈಗಾಗಲೇ ಕೆಂಪು ಗುರುತಿನವರೆಗೆ ಮುಂದುವರಿದಿದೆ.
ಹಸಿರು ಗುರುತು ಇನ್ನಷ್ಟೇ ಮುಂದುವರಿಯಬೇಕಿದೆ.
No comments:
Post a Comment