27.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಅನಿರೀಕ್ಷಿತ ಮುಂಗಾರು ರೀತಿಯ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಅಲ್ಲಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. (ಮಳೆಯ ಮುನ್ಸೂಚನೆ ಇಲ)
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಸ್ಥಿತಿ : ಕೆಂಪು ಗುರುತಿನವರೆಗೆ ಮುಂಗಾರು ಮುಂದುವರಿದಿದ್ದು. ಮುಂದಕ್ಕೆ ಚಲಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದ್ದು, ಮೇ 30 ಅಥವಾ 31ರಂದು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ.
ಜೂನ್ 2 ಅಥವಾ 3ರಂದು ಕರ್ನಾಟಕಕ್ಕೆ ತಲುಪುವ ಸಾಧ್ಯತೆ ಇದೆ.
ಆರಂಭಿಕ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ
No comments:
Post a Comment