Advertise

27 May 2023

28.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 
ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಷ್ಣಾಂಶ ಏರಿಕೆಯಿಂದಾಗಿ ಒಂದೆರಡು ಕಡೆ ಗುಡುಗು ಸಹಿತ ಗಾಳಿಯೊಂದಿಗೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಸ್ಥಿತಿ : ದಕ್ಷಿಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ಮಳೆ ಈಗಾಗಲೇ ಆರಂಭವಾಗಿದ್ದು. ಜೂನ್ 3 ಅಥವಾ 4 ರಂದು ಮುಂಗಾರು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯನ್ನು IMD ವರದಿ ಮಾಡಿದೆ. ಅಲ್ಲಿಂದ 2 ದಿನಗಳಲ್ಲಿ ರಾಜ್ಯದ ಕರಾವಳಿ ಭಾಗಗಳಿಗೂ ಮುಂಗಾರು ಅಧಿಕೃತವಾಗಿ ಪ್ರಕಟಿಸುವ ಮುನ್ಸೂಚನೆ ಇದೆ. 
ನಕ್ಷೆಯಲ್ಲಿ ತೋರಿಸಿದಂತೆ ಕೆಂಪು ಗುರುತಿನವರೆಗೆ ಮುಂಗಾರು ಈಗಾಗಲೇ ತಲುಪಿದ್ದು ಹಸಿರು ಗುರುತು ಇನ್ನಷ್ಟೇ ಮುಂದುವರಿಯಬೇಕಿದೆ. 
ಆರಂಭಕ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ (IMD ತನ್ನ ವರದಿಯಲ್ಲಿಯೂ ಉಲ್ಲೇಖಿಸಿದೆ).

No comments:

Post a Comment

27.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ...