29.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ನಡುವೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಇರಲಿದ್ದು ಸಂಜೆ, ರಾತ್ರಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಸ್ಥಿತಿ : ಮುಂಗಾರು ನಿನ್ನೆಯ ಯಥಾಸ್ಥಿತಿಯನ್ನು ಕಾಪಾಡಿಕೊಂಡಿದೆ. ಮುಂದುವರಿಕೆ ನಿಧಾನವಾಗುತ್ತಿದೆ.
IMDಯು ಜೂನ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಮುನ್ಸೂಚನೆ ನೀಡಿದೆ.
No comments:
Post a Comment