01.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ತುಂತುರು ಇರಬಹುದು.
ತುಮಕೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಔಷಧಿ ಸಿಂಪಡಿಸಲು ಜೂನ್ 30 ಹಾಗೂ ಜುಲೈ 1ರಂದು ಅವಕಾಶ ಸಿಗಬಹುದು.
ಮುಂಗಾರು : ಮುಂಗಾರು ಚುರುಕಾಗುವ ಲಕ್ಷಣಗಳಿದ್ದು ಜುಲೈ 3ರಿಂದ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಜುಲೈ 4ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.