Advertise

30 June 2023

01.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ತುಂತುರು ಇರಬಹುದು. 

ತುಮಕೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಔಷಧಿ ಸಿಂಪಡಿಸಲು ಜೂನ್ 30 ಹಾಗೂ ಜುಲೈ 1ರಂದು ಅವಕಾಶ ಸಿಗಬಹುದು. 

ಮುಂಗಾರು :  ಮುಂಗಾರು ಚುರುಕಾಗುವ ಲಕ್ಷಣಗಳಿದ್ದು ಜುಲೈ 3ರಿಂದ ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ಜುಲೈ 4ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 


29 June 2023

30.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಮುಂಗಾರು ಈಗ ಸರಿಯಾದ ಹಂತಕ್ಕೆ ಬಂದು ಚುರುಕುಗೊಳ್ಳುತ್ತಿದ್ದರೂ, ಮುನ್ಸೂಚನೆಯಲ್ಲಿರುವಷ್ಟು ಮಳೆಯಾಗುತ್ತಿಲ್ಲ. 
ಜುಲೈನಲ್ಲಿ ಈಗಿನ ಪರಿಸ್ಥಿತಿ ಸುಧಾರಿಸಿ, ರಾಜ್ಯದ ಒಳನಾಡು ಭಾಗಗಳಲ್ಲಿ ಸಹ ಮಳೆಯಾಗುವ ಲಕ್ಷಣಗಳಿವೆ. 

28 June 2023

29.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಉತ್ತಮ, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕಲಬುರ್ಗಿ, ಬೀದರ್,  ದಾವಣಗೆರೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 



26 June 2023

27.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ದಕ್ಷಿಣ ಕರಾವಳಿ ಜಿಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು, ತುಮಕೂರು, ಕಲಬುರ್ಗಿ, ಬೀದರ್ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ರಾಜ್ಯದ  ಕರಾವಳಿಗೆ ಹಾಗೂ ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ಒರಿಸ್ಸಾ ರಾಜ್ಯಗಳಿಗೆ ಸೀಮಿತಗೊಂಡಿದ್ದು. ಜುಲೈ 1ರಿಂದ ಕರ್ನಾಟಕದ  ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮುಂಗಾರು ಮಳೆಯ ಮುನ್ಸೂಚನೆ ಇದೆ. 
ಮುಂಗಾರು ತಡವಾದರೂ ಉತ್ತಮ ಮಳೆಯ ಮುನ್ಸೂಚನೆ ಇದೆ 

25 June 2023

26.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 

ಬೆಂಗಳೂರು ಒಂದೆರಡು ಕಡೆ, ಕಲಬುರ್ಗಿ ಹಾಗೂ ಬೀದರ್  ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮುಂಗಾರು ಮುಂದುವರಿಯುವ ಲಕ್ಷಣಗಳಿದ್ದರೆ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ದುರ್ಬಲತೆ ಮುಂದುವರಿಯುವ ಲಕ್ಷಣಗಳಿವೆ. 

24 June 2023

25.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಡುಪಿ, ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ ಉತ್ತಮ ಮಳೆ ಇದ್ದರೆ, ಚಿಕ್ಕಮಗಳೂರು, ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ 




23 June 2023

24.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ ಉಳಿದ ಕರಾವಳಿ ಜಿಲ್ಲೆಗಳ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ದುರ್ಬಲ ಮುಂಗಾರು ಮುಂದುವರಿಲಿದ್ದು, ಜೂನ್ 27ರಿಂದ ಕರಾವಳಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗುವ ಲಕ್ಷಣಗಳಿವೆ. 


22 June 2023

23.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಪಾವಗಡ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು : ಜೂನ್ ಕೊನೆಯ ತನಕವೂ ಮುಂಗಾರು ದುರ್ಬಲತೆ ಮುಂದುವರಿಯಲಿದೆ. 
ಈಗನ ದಕ್ಷಿಣ ಒಳನಾಡು ಭಾಗಗಳ ಅಲ್ಲಲ್ಲಿ ಬೀಸುತ್ತಿರುವ ಮಳೆಯೂ ಜೂನ್ 27ರ ನಂತರ ಕಡಿಮೆಯಾಗುವ ಲಕ್ಷಣಗಳಿದ್ದು, ನಂತರ ಕರಾವಳಿಯಲ್ಲಿ ಮಾತ್ರ ಸಾಮಾನ್ಯ ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 
ಒಟ್ಟಿನಲ್ಲಿ ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಮುಂಗಾರು ಚುರುಕಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಜೂನ್ ತಿಂಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ತೀವ್ರ ಕೊರತೆಯಾಗುವ ಸಾಧ್ಯತೆ ಇದೆ. 

21 June 2023

22.0.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉತ್ತರ ಕನ್ನಡ ಕರಾವಳಿ ತೀರ ಭಾಗಗಳ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 

ತುಮಕೂರು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು : ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಮೋಡವಿದ್ದರೂ ಗಾಳಿಯ ಒತ್ತಡದ ಕೊರತೆಯಿಂದ ಮಳೆಯಾಗುತ್ತಿಲ್ಲ. 
ಈಗನ ಮುನ್ಸೂಚನೆಯಂತೆ ಜೂನ್ 25ರಿಂದ ಮಧ್ಯ ಭಾರತದ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಪರಿಣಾಮದಿಂದ ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ನದಿಗಳು ತುಂಬುವ ಭರವಸೆ ಇದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಜೂನ್ 24ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆಮೇಲೆ ಮಳೆ ಕಡಿಮೆಯಾಗಬಹುದು. 

20 June 2023

21.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಅಲ್ಲಲ್ಲಿ ಮಳೆ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ತುಮಕೂರು - ಚಿತ್ರದುರ್ಗ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಮುಂಗಾರು ಸ್ವಲ್ಪ ಚುರುಕಾದಂತೆ ಕಂಡರೂ ಇನ್ನೆರಡು ಮೂರು ದಿನಗಳಲ್ಲಿ ಕರಾವಳಿಗೆ ಮಾತ್ರ ಸೀಮಿತಗೊಳ್ಳುವ ಸಾಧ್ಯತೆ ಇದೆ. 

19 June 2023

20.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ಉಡುಪಿ ಹಾಗೂ ಉತ್ತರ ಕನ್ನಡ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು : ಮುಂಗಾರು ಉಗಮವೇ ದುರ್ಬಲವಾಗಿರುವ ಕಾರಣ ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಚೇತರಿಕೆಯ ಲಕ್ಷಣಗಳಿಲ್ಲ. 
ಬಿಪರ್ ಜೊಯ್ ಚಂಡಮಾರುತದ ಪ್ರಭಾವದಿಂದ ಉತ್ತರ ಭಾರತ ಹಾಗೂ ಈಶಾನ್ಯ ಭಾರತದ ರಾಜ್ಯಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. 

18 June 2023

19.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದುರ್ಬಲ ಮುಂಗಾರು ಕಾರಣ ಗುಡುಗು ಮಳೆಯಾಗುತ್ತಿದೆ. 

ಚಿಕ್ಕಮಗಳೂರಿನ ಕುದುರೆಮುಖ, ಆಗುಂಬೆ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. 
ಕೊಡಗು ಒಂದೆರಡು ಕಡೆ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಮುಂಗಾರು :ದಕ್ಷಿಣ ಗೋಲಾರ್ಧದ  ಮಡಗಾಸ್ಕರ್ ನ ಆಗ್ನೇಯ  ಭಾಗದಲ್ಲಿ ಈಗ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದ ಮುಂಗಾರು ಇಡೀ ಪ್ರಕ್ರಿಯೆಯೇ ದುರ್ಬಲವಾಗಿರುವಂತಿದೆ. ಸಧ್ಯಕ್ಕೆ ಮುಂಗಾರು ಬಲಗೊಳ್ಳುವ ಲಕ್ಷಣಗಳಿಲ್ಲ. 
ಇದರಿಂದಾಗಿ ರಾಜ್ಯದ ಕರಾವಳಿ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಮಳೆಯ ಸಾಧ್ಯತೆ ಇದ್ದು, ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಿಂಗಾರು ರೀತಿಯ ಪೂರ್ವದ  ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಈ ರೀತಿಯ ಮಳೆಯು ಮುನ್ಸೂಚನೆಗೆ ಸಿಗುವುದು ಕಷ್ಟ ಸಾಧ್ಯವಾಗುತ್ತಿದೆ. 

17 June 2023

18.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ಮಂಗಳೂರು ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಚಿಕ್ಕಮಗಳೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿ, ಪಾವಗಢ, ಕುಷ್ಟಗಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು : ಅರಬ್ಬಿ ಸಮುದ್ರದ ಚಂಡಮಾರುತದ ಪರಿಣಾಮ ಮುಂಗಾರು ಮತ್ತಷ್ಟು ದುರ್ಬಲಗೊಂಡಿದ್ದು, ಜೂನ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆ ಇದೆ. 
ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಕರಾವಳಿಯಲ್ಲಿ ಸಾಮಾನ್ಯ ಮುಂಗಾರು ಮುಂದುವರಿಯುವ ಲಕ್ಷಣಗಳಿವೆ. 


16 June 2023

17.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಕರಾವಳಿ ತೀರದ ಭಾಗಗಳ ಅಲ್ಲಲ್ಲಿ, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಬೆಂಗಳೂರು, ಕೋಲಾರ ಭಾಗಗಳಲ್ಲಿ ಅಲ್ಲಲ್ಲಿ ಹಾಗೂ ವಿಜಯಪುರದ ಸಿಂಧಗಿ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು : ಬಿಪರ್ ಜೋಯ್ ಚಂಡಮಾರುತವು ತೀವ್ರತೆ ಕಳೆದು ಕೊಳ್ಳುತ್ತಿದ್ದು, ರಾಜಸ್ತಾನ, ಪಂಜಾಬ್, ಹರಿಯಾಣ ಹಾಗೂ ದೆಹಲಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

 ದುರ್ಬಲ ಮುಂಗಾರು ಮುಂದುವರಿದಿದ್ದು, ಜೂನ್ 17ರಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಪುನಃ ಮುಂಗಾರು ಮಳೆ ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಜೂನ್ 18ರಿಂದ ರಾಜ್ಯದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಜೂನ್ 22ರಿಂದ ಮಳೆಯ ತೀವ್ರತೆಯು ಕಡಿಮೆಯಾಗಿ ಕರಾವಳಿ ಭಾಗಗಳಿಗೆ ಮಾತ್ರ ಸೀಮಿತವಾಗುವ ಲಕ್ಷಣಗಳಿವೆ. 

14 June 2023

15.06.2033ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಕರಾವಳಿ ತೀರ ಭಾಗಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು ಒಂದೆರಡು ಕಡೆ, ಬೆಂಗಳೂರು ಹಾಗೂ ತುಮಕೂರು ಒಂದೆರಡು ಕಡೆ, ಯಾದಗಿರಿ, ಕಲಬುರ್ಗಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಹಾಗೂ ಚಂಡಮಾರುತ ಸ್ಥಿತಿ :
ಮುಂಗಾರು ಈಗಾಗಲೇ ದುರ್ಬಲವಾಗಿದ್ದು, ಜೂನ್ 17, 18 ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಚುರುಕಾಗುವ ಲಕ್ಷಣಗಳಿವೆ. ಜೂನ್ 19ರಿಂದ ಉತ್ತರ ಒಳನಾಡು ಸೇರಿದಂತೆ ರಾಜ್ಯದಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಬಿಪರ್ ಜೋಯ್ ಚಂಡಮಾರುತವು ಜೂನ್ 15ರ ಸಂಜೆ ಪಾಕಿಸ್ತಾನ ಭಾರತ ಗಡಿಭಾಗದ ಮೂಲಕ ಪ್ರವೇಶಿಸಿ ಪಾಕಿಸ್ತಾನದ ಹೈದರಾಬಾದ್, ಭಾರತದ ರಾಜಸ್ಥಾನ, ಪಂಜಾಬ್, ಹರಿಯಾಣ, ದೆಹಲಿ, ಉತ್ತರಾಖಂಡ ವರೆಗೂ ಸಂಚರಿಸಿ ಶಿಥಿಲಗೊಳ್ಳಲಿದೆ. 



13 June 2023

14.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.006.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಉತ್ತಮ, ದಕ್ಷಿಣ ಕನ್ನಡದ ಮಂಗಳೂರು ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ, ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ  ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಹಾಗೂ ಬಿಪರ್ ಜೋಯ್ ಚಂಡಮಾರುತ :
ಅರಬ್ಬಿ ಸಮುದ್ರದಲ್ಲಿನ ಬಿಪರ್ ಜೋಯ್ ಚಂಡಮಾರುತವು ಜೂನ್ 15ರ ಸಂಜೆ  ಪಾಕಿಸ್ತಾನ, ಭಾರತ ಗಡಿ ಭಾಗಕ್ಕೆ ಅಪ್ಪಳಿಸಲಿದ್ದು, ಪಾಕಿಸ್ತಾನದ ಹೈದರಾಬಾದ್ ಮೂಲಕ ರಾಜಸ್ತಾನಕ್ಕೆ ಪ್ರವೇಶಿಸಿ ಶಿಥಿಲಗೊಳ್ಳಲಿದೆ. 
ಇದರ ಪರಿಣಾಮದಿಂದ ಮುಂಗಾರು ದುರ್ಬಲಗೊಂಡಿದ್ದು, ಕೇರಳ ಕರಾವಳಿಗೆ ಮಾತ್ರ ಸೀಮಿತಗೊಂಡಿದೆ. ಜೂನ್ 18 ರಿಂದ ರಾಜ್ಯದ ಅಲ್ಲಲ್ಲಿ ಮುಂಗಾರು ಚುರುಕಾಗುವ ಲಕ್ಷಣಗಳಿದ್ದರೂ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ. 


12 June 2023

13.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡದ ವಾತಾವರಣದೊಂದಿಗೆ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚಿಕ್ಕಮಗಳೂರು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಹಾಗೂ ಬಿಪರ್ ಜೋಯಿ:
ಮುಂಗಾರು ದುರ್ಬಲಗೊಂಡಿದ್ದು, ಅರಬ್ಬಿ ಸಮುದ್ರದ ಚಂಡಮಾರುತವು ಪಾಕಿಸ್ತಾನ - ಭಾರತದ ಗುಜರಾತ್ ಗಡಿಭಾಗದ ಮೂಲಕ ಪ್ರವೇಶಿಸುತ್ತಿದ್ದಂತೆಯೇ ಮತ್ತಷ್ಟು ದುರ್ಬಲಗೊಳ್ಳವ ಲಕ್ಷಣಗಳಿವೆ. ಈಗಿನ ಮುನ್ಸೂಚನೆಯಂತೆ ಜೂನ್ 18ರಿಂದ ಮತ್ತೆ ಚುರುಕಾಗುವ ಸಾಧ್ಯತೆ ಇದೆ. (ರಾಜ್ಯದ ಒಳನಾಡು ಭಾಗಗಳಲ್ಲಿ ಸಹ) 
ಬಿಪರ್ ಜೊಯಿ ಚಂಡಮಾರುತವು ಜೂನ್ 15ರ ಸಂಜೆ ಪಾಕಿಸ್ತಾನ ಭಾರತ (ಗುಜರಾತ್) ಗಡಿ ಭಾಗಕ್ಕೆ ಅಪ್ಪಳಿಸುವ ಲಕ್ಷಣಗಳಿವೆ. ಪಾಕಿಸ್ತಾನದ ಹೈದರಾಬಾದ್ ಮೂಲಕ ರಾಜಸ್ತಾನಕ್ಕೆ ಪ್ರವೇಶಿಸಿ ಶಿಥಿಲಗೊಳ್ಳುವ ಸಾಧ್ಯತೆ ಇದೆ. 

ಈಗನ ಮುನ್ಸೂಚನೆಯಂತೆ ಜೂನ್ 14 ರಿಂದ 17ರ ತನಕ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಸೂಕ್ತ ಸಮವಾಗಿದೆ . 

10 June 2023

11.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.06.2023 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ, ರಾಜ್ಯದ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಮೋಡ ಕವಿದ ವಾತಾವರಣದೊಂದಿಗೆ ಹೆಚ್ಚಿನ ಕಡೆ ತುಂತುರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಒಂದೆರಡು ಕಡೆ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ತಾಪಮಾನ ಏರಿಕೆಯಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಮುಂಗಾರು ಹಾಗೂ ಚಂಡಮಾರುತ :
ಅರಬ್ಬಿ ಸಮುದ್ರದ ಚಂಡಮಾರುತವು ಉತ್ತರಕ್ಕೆ ಚಲಿಸುತ್ತಿದ್ದು ಜೂನ್ 14ರ ಸಂಜೆ ಅಥವಾ ರಾತ್ರಿ ಪಾಕಿಸ್ತಾನ ಕರಾವಳಿಯ ಒರ್ಮಾರಾ ಹಾಗೂ ಕರಾಚಿಯ ಮಧ್ಯ ಅಪ್ಪಳಿಸುವ ಲಕ್ಷಣಗಳಿವೆ. 
ಮುಂಗಾರು ಈಗಾಗಲೇ ರಾಜ್ಯದ ಕರಾವಳಿಗೂ ಆಗಮಿಸಿದ್ದು ರಾಜ್ಯದ ಕರಾವಳಿಯ ಹಲವೆಡೆ ಮಳೆಯ ಮುನ್ಸೂಚನೆ ಇದೆ. ಈಗಿನ ಮುಂಗಾರು ಕರಾವಳಿ ತೀರ ಭಾಗಗಳಗೆ ಮಾತ್ರ ಸೀಮಿತವಾಗಿದೆ. ಚಂಡಮಾರುತ ಅಪ್ಪಳಿಸಿ ದುರ್ಬಲಗೊಳ್ಳುತ್ತಿರುವಂತಯೇ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆದರೂ ಜೂನ್ ತಿಂಗಳ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...