Advertise

02 June 2023

03.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಮೋಡ ಅಥವಾ ಅಲ್ಲಲ್ಲಿ ತುಂತುರು, ದಕ್ಷಿಣ ಕನ್ನಡ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಮೋಡ ಅಥವಾ ತುಂತುರು ಇರಬಹುದು. ಉತ್ತರ ಕನ್ನಡ ಹಗುರವಾಗಿ ಮೋಡದ ವಾತಾವರಣದ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಅಧಿಕ ತಾಪಮಾನದಿಂದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಗಾಳಿಯ ಬಗ್ಗೆ ಎಚ್ಚರವಿರಲಿ. 

ಮುಂಗಾರು ಸ್ಥಿತಿ : ಜೂನ್ 5ರ ಅಂದಾಜು ಅರಬ್ಬಿ ಸಮುದ್ರದಲ್ಲಿ ದಕ್ಷಿಣ ಕೇರಳಕ್ಕೆ ನೇರವಾಗಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ. ಜೂನ್ 13, 14ರಂದು ಓಮನ್ ಕಡಲ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. 
ಇದರ ಪರಿಣಾಮದಿಂದ ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದ್ದು ಜೂನ್ 9ರ ನಂತರ ಮುಂಗಾರು ಚುರುಕಾಗುವ ಲಕ್ಷಣಗಳಿವೆ ಹಾಗೂ ಕೇರಳ ಉತ್ತಮ ಮಳೆಯ ಮುನ್ಸೂಚನೆಯೂ ಇದೆ. ಆಮೇಲೆ 2 ದಿನಗಳಲ್ಲಿ ರಾಜ್ಯದ ಕರಾವಳಿ ಭಾಗಗಳಿಗೂ ವ್ಯಾಪಿಸುವ ಸಾಧ್ಯತೆ ಇದೆ. 



No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...