04.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಸ್ಥಿತಿ : ಶ್ರೀಲಂಕಾ ತನಕ ಪ್ರವೇಶಿಸಿದ ಮುಂಗಾರು ನಾಳೆ ಕೇರಳ ಹಾಗೂ ಜೂನ್ 5 ರಂದು ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ.
ಈಗನ ಮುನ್ಸೂಚನೆಯಂತೆ ಜೂನ್ 4 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಇಡೀ ಜೂನ್ ತಿಂಗಳ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.
ವಾಯುಭಾರ ಕುಸಿತ : ಜೂನ್ 5ರಂದು ಅರಬ್ಬಿ ಸಮುದ್ರದಲ್ಲಿ ದಕ್ಷಿಣ ಕೇರಳಕ್ಕೆ ನೇರವಾಗಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಲಿದ್ದು, ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ. ಇದರಿಂದ ಮುಂಗಾರು ಮಾರುತಗಳ ಚಲನೆಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ. ಆದಾಗ್ಯೂ ಮುಂಗಾರು ಪ್ರಭಲಗೊಳ್ಳುವ ಲಕ್ಷಣಗಳು ಗೋಚರಿಸುತ್ತಿಲ್ಲ.
No comments:
Post a Comment