ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ತುಮಕೂರಿನ ಒಂದೆರಡು ಕಡೆ, ಶಿವಮೊಗ್ಗ, ಚಾಮರಾಜನಗರ ಅಲ್ಲಲ್ಲಿ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಮುಂಗಾರು ಸ್ಥಿತಿ : ಇವತ್ತು ಅಧಿಕೃತವಾಗಿ, ಸಾಂಕೇತಿಕವಾಗಿ ಮುಂಗಾರು ಕೇರಳಕ್ಕೆ ಪ್ರವೇಶಿಸಲಿದೆ. ನಾಳೆ, ನಾಡಿದ್ದು ರಾಜ್ಯಕ್ಕೆ ಪ್ರವೇಶಿಸಲಿದೆ.
ಜೂನ್ 5 ರಂದು ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು, ಮುಂಗಾರನ್ನು ಸ್ವಲ್ಪ ಚುರುಕುಗೊಳಿಸೂವ ಸಾಧ್ಯತೆ ಇದೆ.
ಆರಂಭಿಕ ದುರ್ಬಲವಾಗಿದದರೂ ಜೂನ್ 9ರಿಂದ ಕೇರಳ ಹೆಚ್ಚಿನ ಭಾಗಗಳಲ್ಲಿ ಹಾಗೂ ಜೂನ್ 10, 11ರಂದು ರಾಜ್ಯದ ಕರಾವಳಿ ಭಾಗಗಳಲ್ಲಿಯೂ ಭಾರಿ ಮಳೆಯ ಮುನ್ಸೂಚನೆ ಇದೆ.
No comments:
Post a Comment