06.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಕರಾವಳಿ ತೀರ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆ, ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ, ಮಂಡ್ಯ, ತುಮಕೂರು, ಪಾವಗಡ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಗಾಳಿಯ ಬಗ್ಗೆ ಎಚ್ಚರವಿರಲಿ
ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಹಾಗೂ ವಾಯುಭಾರ ಕುಸಿತ :
ಈಗಾಗಲೇ ಕೇರಳ ಪ್ರವೇಶಿಸಿದ ಮುಂಗಾರು ಮಾರುತಗಳು ದುರ್ಬಲವಾಗಿದೆ. ಇವತ್ತು ಸಂಜೆ ಕರ್ನಾಟಕದ ಕರಾವಳಿ ಭಾಗಗಳಿಗೂ ಮುಂಗಾರು ಪ್ರವೇಶಿಸಲಿದೆ. ಬಾರಿ ಮಳೆಯ ನಿರೀಕ್ಷೆ ಇಲ್ಲ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಕ್ಕೆ ವೇದಿಕೆ ಸಜ್ಜಾಗಿದ್ದು, ಇನ್ನೆರಡು ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಪರಿಣಾಮವಾಗಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿದ್ದರೂ, ಚಂಡಮಾರುತ ಉತ್ತರಕ್ಕೆ ಚಲಿಸಿದಂತೆಯೇ ದುರ್ಬಲತೆ ಮುಂದುವರಿಯುವ ಸಾಧ್ಯತೆ ಇದೆ.
No comments:
Post a Comment