08.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಕೇರಳ, ದಕ್ಷಿಣ ಕನ್ನಡ ಹಾಗೂ ಉಡುಪಿ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ (ಮುಂಗಾರು) ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ನಡುವೆ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ತಾಪಮಾನ ಏರಿಕೆಯಿಂದ ಮುನ್ಸೂಚನೆಗೆ ಸಿಗದೆ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ಸ್ಥಿತಿ ಹಾಗೂ ಚಂಡಮಾರುತ : ಕೇರಳ ಹಾಗೂ ದಕ್ಷಿಣ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಈಗಾಗಲೇ ಮುಂಗಾರು ರೀತಿಯ ಮೋಡದ ಚಲನೆಗಳು ಆರಂಭವಾಗಿದ್ದು, ಅಧಿಕೃತವಾಗಿ ಮುಂಗಾರು ಆಗಮನದ ಘೋಷಣೆ ಬಾಕಿ ಇದೆ.
ಈಗನ ಅರಬ್ಬಿ ಸಮುದ್ರದ ಚಂಡಮಾರುತವು ಜೂನ್ 13, 14 ರಂದು ಒಮಾನ್ ಕಡಲ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ.
ಇದೇ ಸಮಯದಲ್ಲಿ ರಾಜ್ಯದಲ್ಲಿ ಮುಂಗಾರು ಚುರುಕಾಗುವ ಲಕ್ಷಣಗಳಿವೆ.
No comments:
Post a Comment