Advertise

08 June 2023

09.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಗದಗ, ಕೊಪ್ಪಳ, ಬಾಗಲಕೋಟೆ, ಮಂಡ್ಯ, ಹಾಸನ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಕಲಬುರ್ಗಿ, ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಅಧಿಕ ತಾಪಮಾನದಿಂದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಅರಬ್ಬಿ ಸಮುದ್ರ ಚಂಡಮಾರುತದಿಂದ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಾಮಾನದಿಂದ  ಮುನ್ಸೂಚನಾ ವರದಿಗಳೂ ತಪ್ಪುತ್ತಿವೆ. 

ಮುಂಗಾರು ಹಾಗೂ ಚಂಡಮಾರುತ : 
ಅರಬ್ಬಿ ಸಮುದ್ರದಲ್ಲಿ ಉತ್ತರಕ್ಕೆ ಚಲಿಸುತ್ತಿರುವ ಚಂಡಮಾರುತವು ಈಗಿನ ಪ್ರಕಾರ ಜೂನ್ 15ರ ನಂತರ ಉತ್ತರ ಯಮನ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಅಲ್ಲಿಯವರೆಗೆ  ಮುಂಗಾರು ದುರ್ಬಲವಾಗಿದ್ದು,  ಕೇರಳ ಹಾಗೂ ರಾಜ್ಯದ ದಕ್ಷಿಣ ಕರಾವಳಿ ತೀರ ಭಾಗಗಳಗೆ ಮಾತ್ರ ಸೀಮಿತವಾಗಿದೆ.
ಚಂಡಮಾರುತವು ರಾಜ್ಯದ ಕರಾವಳಿಯಿಂದ ದೂರ ಸರಿಯುತ್ತಿದ್ದು, ಮುಂಗಾರು ಆರಂಭವಾಗುವ ಸಮಯದಲ್ಲಿ ಸ್ವಲ್ಪ ಅತಿಯಾದ ಸಮುದ್ರದ ಉಬ್ಬರ ಹಾಗೂ ಗಾಳಿಯ ಪ್ರಮಾಣ ಹೆಚ್ಚಿರುವುದು ಸಹಜ ಪ್ರಕ್ರಿಯೆಯಾಗಿದೆ. 

No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...