Advertise

09 June 2023

10.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ, ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ತಾಲ್ಲೂಕಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಸುಳ್ಯ ಹಾಗೂ ಕಡಬ ತಾಲ್ಲೂಕುಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 
ಉಡುಪಿಯ ಕರಾವಳಿ ತೀರ ಹಾಗೂ ಕಾರ್ಕಳ ತಾಲ್ಲೂಕಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 
ಮುಂಗಾರು ಪ್ರವೇಶಿಸುವ ಅಥವಾ ಚುರುಕಾಗುವ ಸಂದರ್ಭದಲ್ಲಿ ಸಮುದ್ರ ಅಲೆಗಳ ತೀವ್ರತೆ ಹಾಗೂ ಗಾಳಿಯ ವೇಗ ಹೆಚ್ಚಿರುವುದು ಸಾಮಾನ್ಯ. ಚಂಡಮಾರುತದ ಪ್ರಭಾವ ಮುಂಗಾರು ಮೇಲಿದೆ ಹೊರತು ರಾಜ್ಯದ ಕರಾವಳಿಗಲ್ಲ

ಕೊಡಗು, ಚಿಕ್ಕಮಗಳೂರು ಅಲ್ಲಲ್ಲಿ, ತುಮಕೂರು, ಪಾವಗಢ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ಚಿತ್ರದುರ್ಗ ಹಾಗೂ ಕೊಪ್ಪಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಅಧಿಕ ತಾಪಮಾನದಿಂದ ದಕ್ಷಿಣ ಒಳನಾಡು ಭಾಗಗಳ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 

ಮುಂಗಾರು ಹಾಗೂ ಚಂಡಮಾರುತ :
 ಮುಂಗಾರು ಈಗಾಗಲೇ ಕೆರಳದಲ್ಲಿ ಸ್ವಲ್ಪ ಚುರುಕಾಗಿದ್ದು, ಇವತ್ತು ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. ಆದರೆ ಮುಂಗಾರು ಕರಾವಳಿ ಭಾಗಗಳಿಗೆ ಮಾತ್ರ ಸೀಮಿತವಾಗಲಿದೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಚಂಡಮಾರುತ ಶಿಥಿಲಗೊಂಡ ನಂತರ ಚಿತ್ರಣ ಬದಲಾಗಬಹುದು. 

ಅರಬ್ಬಿ ಸಮುದ್ರದಲ್ಲಿನ ಚಂಡಮಾರುತವು ಜೂನ್ 14 ರಂದು ಪಾಕಿಸ್ತಾನದ ಕರಾಚಿಗೆ ಅಪ್ಪಳಿಸುವ ಲಕ್ಷಣಗಳಿವೆ. 


No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...