14.006.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಉತ್ತಮ, ದಕ್ಷಿಣ ಕನ್ನಡದ ಮಂಗಳೂರು ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ, ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಹಾಗೂ ಬಿಪರ್ ಜೋಯ್ ಚಂಡಮಾರುತ :
ಅರಬ್ಬಿ ಸಮುದ್ರದಲ್ಲಿನ ಬಿಪರ್ ಜೋಯ್ ಚಂಡಮಾರುತವು ಜೂನ್ 15ರ ಸಂಜೆ ಪಾಕಿಸ್ತಾನ, ಭಾರತ ಗಡಿ ಭಾಗಕ್ಕೆ ಅಪ್ಪಳಿಸಲಿದ್ದು, ಪಾಕಿಸ್ತಾನದ ಹೈದರಾಬಾದ್ ಮೂಲಕ ರಾಜಸ್ತಾನಕ್ಕೆ ಪ್ರವೇಶಿಸಿ ಶಿಥಿಲಗೊಳ್ಳಲಿದೆ.
ಇದರ ಪರಿಣಾಮದಿಂದ ಮುಂಗಾರು ದುರ್ಬಲಗೊಂಡಿದ್ದು, ಕೇರಳ ಕರಾವಳಿಗೆ ಮಾತ್ರ ಸೀಮಿತಗೊಂಡಿದೆ. ಜೂನ್ 18 ರಿಂದ ರಾಜ್ಯದ ಅಲ್ಲಲ್ಲಿ ಮುಂಗಾರು ಚುರುಕಾಗುವ ಲಕ್ಷಣಗಳಿದ್ದರೂ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ.
No comments:
Post a Comment