15.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಕರಾವಳಿ ತೀರ ಭಾಗಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು ಒಂದೆರಡು ಕಡೆ, ಬೆಂಗಳೂರು ಹಾಗೂ ತುಮಕೂರು ಒಂದೆರಡು ಕಡೆ, ಯಾದಗಿರಿ, ಕಲಬುರ್ಗಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಹಾಗೂ ಚಂಡಮಾರುತ ಸ್ಥಿತಿ :
ಮುಂಗಾರು ಈಗಾಗಲೇ ದುರ್ಬಲವಾಗಿದ್ದು, ಜೂನ್ 17, 18 ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಚುರುಕಾಗುವ ಲಕ್ಷಣಗಳಿವೆ. ಜೂನ್ 19ರಿಂದ ಉತ್ತರ ಒಳನಾಡು ಸೇರಿದಂತೆ ರಾಜ್ಯದಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಬಿಪರ್ ಜೋಯ್ ಚಂಡಮಾರುತವು ಜೂನ್ 15ರ ಸಂಜೆ ಪಾಕಿಸ್ತಾನ ಭಾರತ ಗಡಿಭಾಗದ ಮೂಲಕ ಪ್ರವೇಶಿಸಿ ಪಾಕಿಸ್ತಾನದ ಹೈದರಾಬಾದ್, ಭಾರತದ ರಾಜಸ್ಥಾನ, ಪಂಜಾಬ್, ಹರಿಯಾಣ, ದೆಹಲಿ, ಉತ್ತರಾಖಂಡ ವರೆಗೂ ಸಂಚರಿಸಿ ಶಿಥಿಲಗೊಳ್ಳಲಿದೆ.
No comments:
Post a Comment