17.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಕರಾವಳಿ ತೀರದ ಭಾಗಗಳ ಅಲ್ಲಲ್ಲಿ, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಬೆಂಗಳೂರು, ಕೋಲಾರ ಭಾಗಗಳಲ್ಲಿ ಅಲ್ಲಲ್ಲಿ ಹಾಗೂ ವಿಜಯಪುರದ ಸಿಂಧಗಿ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ಬಿಪರ್ ಜೋಯ್ ಚಂಡಮಾರುತವು ತೀವ್ರತೆ ಕಳೆದು ಕೊಳ್ಳುತ್ತಿದ್ದು, ರಾಜಸ್ತಾನ, ಪಂಜಾಬ್, ಹರಿಯಾಣ ಹಾಗೂ ದೆಹಲಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ದುರ್ಬಲ ಮುಂಗಾರು ಮುಂದುವರಿದಿದ್ದು, ಜೂನ್ 17ರಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಪುನಃ ಮುಂಗಾರು ಮಳೆ ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಜೂನ್ 18ರಿಂದ ರಾಜ್ಯದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಜೂನ್ 22ರಿಂದ ಮಳೆಯ ತೀವ್ರತೆಯು ಕಡಿಮೆಯಾಗಿ ಕರಾವಳಿ ಭಾಗಗಳಿಗೆ ಮಾತ್ರ ಸೀಮಿತವಾಗುವ ಲಕ್ಷಣಗಳಿವೆ.
No comments:
Post a Comment