Advertise

17 June 2023

18.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ಮಂಗಳೂರು ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಚಿಕ್ಕಮಗಳೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿ, ಪಾವಗಢ, ಕುಷ್ಟಗಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು : ಅರಬ್ಬಿ ಸಮುದ್ರದ ಚಂಡಮಾರುತದ ಪರಿಣಾಮ ಮುಂಗಾರು ಮತ್ತಷ್ಟು ದುರ್ಬಲಗೊಂಡಿದ್ದು, ಜೂನ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆ ಇದೆ. 
ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಕರಾವಳಿಯಲ್ಲಿ ಸಾಮಾನ್ಯ ಮುಂಗಾರು ಮುಂದುವರಿಯುವ ಲಕ್ಷಣಗಳಿವೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ...