19.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದುರ್ಬಲ ಮುಂಗಾರು ಕಾರಣ ಗುಡುಗು ಮಳೆಯಾಗುತ್ತಿದೆ.
ಚಿಕ್ಕಮಗಳೂರಿನ ಕುದುರೆಮುಖ, ಆಗುಂಬೆ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ.
ಕೊಡಗು ಒಂದೆರಡು ಕಡೆ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು :ದಕ್ಷಿಣ ಗೋಲಾರ್ಧದ ಮಡಗಾಸ್ಕರ್ ನ ಆಗ್ನೇಯ ಭಾಗದಲ್ಲಿ ಈಗ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದ ಮುಂಗಾರು ಇಡೀ ಪ್ರಕ್ರಿಯೆಯೇ ದುರ್ಬಲವಾಗಿರುವಂತಿದೆ. ಸಧ್ಯಕ್ಕೆ ಮುಂಗಾರು ಬಲಗೊಳ್ಳುವ ಲಕ್ಷಣಗಳಿಲ್ಲ.
ಇದರಿಂದಾಗಿ ರಾಜ್ಯದ ಕರಾವಳಿ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಮಳೆಯ ಸಾಧ್ಯತೆ ಇದ್ದು, ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಿಂಗಾರು ರೀತಿಯ ಪೂರ್ವದ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಈ ರೀತಿಯ ಮಳೆಯು ಮುನ್ಸೂಚನೆಗೆ ಸಿಗುವುದು ಕಷ್ಟ ಸಾಧ್ಯವಾಗುತ್ತಿದೆ.
No comments:
Post a Comment