20.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ಉಡುಪಿ ಹಾಗೂ ಉತ್ತರ ಕನ್ನಡ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ಮುಂಗಾರು ಉಗಮವೇ ದುರ್ಬಲವಾಗಿರುವ ಕಾರಣ ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಚೇತರಿಕೆಯ ಲಕ್ಷಣಗಳಿಲ್ಲ.
ಬಿಪರ್ ಜೊಯ್ ಚಂಡಮಾರುತದ ಪ್ರಭಾವದಿಂದ ಉತ್ತರ ಭಾರತ ಹಾಗೂ ಈಶಾನ್ಯ ಭಾರತದ ರಾಜ್ಯಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ.
No comments:
Post a Comment