Advertise

22 June 2023

23.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಪಾವಗಡ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು : ಜೂನ್ ಕೊನೆಯ ತನಕವೂ ಮುಂಗಾರು ದುರ್ಬಲತೆ ಮುಂದುವರಿಯಲಿದೆ. 
ಈಗನ ದಕ್ಷಿಣ ಒಳನಾಡು ಭಾಗಗಳ ಅಲ್ಲಲ್ಲಿ ಬೀಸುತ್ತಿರುವ ಮಳೆಯೂ ಜೂನ್ 27ರ ನಂತರ ಕಡಿಮೆಯಾಗುವ ಲಕ್ಷಣಗಳಿದ್ದು, ನಂತರ ಕರಾವಳಿಯಲ್ಲಿ ಮಾತ್ರ ಸಾಮಾನ್ಯ ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 
ಒಟ್ಟಿನಲ್ಲಿ ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಮುಂಗಾರು ಚುರುಕಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಜೂನ್ ತಿಂಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ತೀವ್ರ ಕೊರತೆಯಾಗುವ ಸಾಧ್ಯತೆ ಇದೆ. 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...