25 June 2023

26.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 

ಬೆಂಗಳೂರು ಒಂದೆರಡು ಕಡೆ, ಕಲಬುರ್ಗಿ ಹಾಗೂ ಬೀದರ್  ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮುಂಗಾರು ಮುಂದುವರಿಯುವ ಲಕ್ಷಣಗಳಿದ್ದರೆ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ದುರ್ಬಲತೆ ಮುಂದುವರಿಯುವ ಲಕ್ಷಣಗಳಿವೆ. 

No comments:

Post a Comment