29.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಉತ್ತಮ, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕಲಬುರ್ಗಿ, ಬೀದರ್, ದಾವಣಗೆರೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
No comments:
Post a Comment