30.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ಈಗ ಸರಿಯಾದ ಹಂತಕ್ಕೆ ಬಂದು ಚುರುಕುಗೊಳ್ಳುತ್ತಿದ್ದರೂ, ಮುನ್ಸೂಚನೆಯಲ್ಲಿರುವಷ್ಟು ಮಳೆಯಾಗುತ್ತಿಲ್ಲ.
ಜುಲೈನಲ್ಲಿ ಈಗಿನ ಪರಿಸ್ಥಿತಿ ಸುಧಾರಿಸಿ, ರಾಜ್ಯದ ಒಳನಾಡು ಭಾಗಗಳಲ್ಲಿ ಸಹ ಮಳೆಯಾಗುವ ಲಕ್ಷಣಗಳಿವೆ.
No comments:
Post a Comment