Advertise

30 July 2023

31.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಎರಡು, ಮೂರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಮಲೆನಾಡು ಭಾಗಗಳಲ್ಲಿ ಬಿಟ್ಟು ಬಿಟ್ಟು ತುಂತುರು ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಸಾಧ್ಯತೆ ಇದ್ದು. ಉಳಿದ ಕರ್ನಾಟಕ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ದುರ್ಬಲ ಮುಂಗಾರು ಮುಂದುವರಿಯಲಿದೆ. ಪಶ್ಚಿಮ ಬಂಗಾಳ, ಬಾಂಗ್ಲಾ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಬಂಗ್ಲಾದೇಶ ಕಡೆ ಚಲಿಸುವ ಲಕ್ಷಣಗಳಿವೆ. ಪರಿಣಾಮವಾಗಿ ರಾಜ್ಯದ ಕರಾವಳಿ ಭಾಗದಲ್ಲಿ ಆಗಷ್ಟ್ 6ರ ತನಕ ದಿನಕ್ಕೆ ಎರಡು, ಮೂರು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

29 July 2023

30.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

30.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಹೆಚ್ಚಿರಬಹುದು. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಹ ಒಂದೆರಡು ಮಳೆ ಹೆಚ್ಚಿರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 


ಮುಂಗಾರು ದುರ್ಬಲವಾಗಿದ್ದು, ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ತೀರಾ ಕಡಿಮೆ. ಕರಾವಳಿ ಭಾಗಗಳಲ್ಲಿ ಆಗಷ್ಟ್ 6ರ ತನಕ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. (ಅಧಿಕ ಪ್ರಮಾಣದಲ್ಲಿ ಔಷಧಿ ತಯಾರಿಕೆ ಬೇಡ. ಅಗತ್ಯಕ್ಕೆ ತಕ್ಕ ತಯಾರಿಕೆ ಸಾಕು) 

28 July 2023

29.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಅಲ್ಲಲ್ಲಿ ಆಗಾಗ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ತುಂತುರು ಮಳೆ ಜಾಸ್ತಿ ಇರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲಗೊಂಡಿದ್ದು, ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕುಸಿದಿದೆ. ಕರಾವಳಿ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದ್ದರೂ
ಜುಲೈ 30,31ರ ನಂತರ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

27 July 2023

28.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. 
ಕೊಡಗು ಒಂದೆರಡು ಕಡೆ ಸಾಮಾನ್ಯ ಮಳೆಯ ಇದ್ದರೆ ಹೆಚ್ಚಿನ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕಲಬುರ್ಗಿ, ಯಾದಗಿರಿ (red alert), ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲಗೊಳ್ಳುತ್ತಿದ್ದು, ಜುಲೈ 28ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಲಿದೆ. ಜುಲೈ 30ರ ನಂತರ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು

26 July 2023

27.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ದಿನವಿಡೀ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಜೋರಿರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ಉಳಿದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ ಭಾಗಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

ಮುಂಗಾರು ರಾಜ್ಯದಾದ್ಯಂತ ಉತ್ತಮ ಸ್ಥಿತಿಯಲ್ಲಿದ್ದು ಜುಲೈ 28ರಿಂದ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಜುಲೈ 30ರ ತನಕ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಇದ್ದರೆ ನಂತರ ಮತ್ತಷ್ಟು ದುರ್ಬಲಗೊಳ್ಳವ ಸಾಧ್ಯತೆ ಇದೆ. 
ಒಡಿಶಾ, ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಇವತ್ತು ಸಂಜೆ ಶಿಥಿಲಗೊಳ್ಳುವ ಲಕ್ಷಣಗಳಿವೆ. 

25 July 2023

26. 07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆ ಮುಂದುವರಿಯಲಿದೆ. 

ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ವಿಜಯಪುರ ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

ರಾಜ್ಯದಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯಲ್ಲಿ ಅಂದ್ರಾ, ಒಡಿಶಾ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಈಗಿನ ಮುಂಗಾರು. ಉತ್ತಮ ಸ್ಥಿತಿಗೆ ಕಾರಣವಾಗಿದೆ. ಜುಲೈ 26ರ ಸಂಜೆ ಈ ತಿರುಗುವಿಕೆಯು ಶಿಥಿಲಗೊಳ್ಳುವ ಲಕ್ಷಣಗಳಿವೆ. 
ರಾಜ್ಯದಾದ್ಯಂತ ಜುಲೈ 27ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆಮೇಲೆ ಕಡಿಮೆಯಾದರೂ ಕರಾವಳಿ ಭಾಗಗಳಲ್ಲಿ ಜುಲೈ 31ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

24 July 2023

25.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.

ಇವತ್ತಿನಿಂದ ಜುಲೈ 27ರ ತನಕ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ, ಕೆಲವು ಭಾಗಗಳಲ್ಲಿ ತುಂತುರು ಮಳೆ ಇರಬಹುದು. 

ಮುಂಗಾರು ಗರಿಷ್ಠ ಪ್ರಮಾಣದಲ್ಲಿದ್ದು ಜುಲೈ 27ರ ತನಕ ರಾಜ್ಯದಾದ್ಯಂತ ಉತ್ತಮ ಮಳೆಯ ನಿರೀಕ್ಷೆ ಇದೆ. 28ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿಯಲ್ಲಿ ಮತ್ತೆರಡು ದಿನಗಳ ಕಾಲ ಸಾಮಾನ್ಯ ಮಳೆಯ ಲಕ್ಷಣಗಳಿವೆ. 
ಜುಲೈ 31 ಅಥವಾ ಆಗಷ್ಟ್ 1ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 



23 July 2023

24.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ಚಿತ್ರದುರ್ಗ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ 

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಚುರುಕಾಗಿದ್ದು ಜುಲೈ 27ರ ತನಕ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. 28ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿಯಲ್ಲಿ ಮಾತ್ರ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ. 


22 July 2023

23.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. 
ಗಾಳಿಯ ಪ್ರಭಾವ ಕಡಿಮೆಯಾಗಿದ್ದರಿಂದ ಮಳೆ ಹೆಚ್ಚಾಗಬಹುದು. 

ಕೊಡಗು (ಉತ್ತಮ) , ಚಿಕ್ಕಮಗಳೂರು, ಶಿವಮೊಗ್ಗ ಸಹ ಮಳೆಯ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮಳೆ ಹೆಚ್ಚಿರುವುದರಿಂದ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆ. 

ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಾಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಜುಲೈ 26ರ ತನಕ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಲಿದ್ದು 28ರಿಂದ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ. 

21 July 2023

22.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಮಳೆಯ ಮುನ್ಸೂಚನೆ ಇದೆ. ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲ. ಗಾಳಿಯ ರಭಸ ಕಡಿಮೆಯಾದರೆ ಉತ್ತಮ ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾದರೆ ಮಲೆನಾಡು ಭಾಗಗಳಲ್ಲಿ ತೀವ್ರತೆ ಸ್ವಲ್ಪ ಕಡಿಮೆ ಆಗಬಹುದು 

ಹಾವೇರಿ ಸಾಮಾನ್ಯ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ಚುರುಕಾಗಿದ್ದು ಜುಲೈ 21ರಿಂದ ಜುಲೈ 26 ಅಥವಾ 27ರ ತನಕ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 28ರಿಂದ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ. 

20 July 2023

21.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ಗಾಳಿಯ ಪ್ರಭಾವದಿಂದ ಮೋಡವಿದ್ದರೂ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ 
ಕಲಬುರ್ಗಿ, ಬೀದರ್ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 


ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡರೂ, ಮೋಡವಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇದರ ಪರಿಣಾಮದಿಂದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. 



19 July 2023

20.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಹಾಸನ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಚುರುಕಾಗಿದ್ದು, ಕರಾವಳಿಯಲ್ಲಿ ಗಾಳಿಯ ಪ್ರಭಾವದಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಲಕ್ಷಣಗಳಿಲ್ಲ. ಜುಲೈ 23ರಿಂದ ರಾಜ್ಯದಾದ್ಯಂತ ಮುಂಗಾರು ತನ್ನ ಪ್ರಭಾವ ಬೀರುವ ಲಕ್ಷಣಗಳಿವೆ. ಉತ್ತಮ ಮಳೆಯ ನಿರೀಕ್ಷೆ ಇದೆ.
ಸಧ್ಯಕ್ಕೆ ಯಾವುದೇ ರೀತಿಯ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿಲ್ಲ. 

18 July 2023

19.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

19.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಆಗಾಗ ಮಳೆಯ ಮುನ್ಸೂಚನೆ ಇದೆ. 
ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಬಿಸಿಲು, ಮೋಡ,  ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ,ಗದಗ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ದಾವಣಗೆರೆ, ಚಿತ್ರದುರ್ಗ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಸ್ವಲ್ಪ ಚುರುಕಾದಂತೆ ಕಂಡರೂ ಮಾರುತಗಳು ನಿರೀಕ್ಷಿತ ಮಟ್ಟದಲ್ಲಿ ಮೋಡಗಳನ್ನು ಹೊತ್ತು ತರದಿರುವುದರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. 

17 July 2023

18.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರದ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು, ಮೋಡ ಒಂದೆರಡು ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಜುಲೈ 19ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಚುರುಕಾಗುವ ಲಕ್ಷಣಗಳಿದ್ದು, ಜುಲೈ 20ರಿಂದ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿಯೂ ಮುಂಗಾರು ಸ್ವಲ್ಪ ಬಲಗೊಳ್ಳುವ ಸಾಧ್ಯತೆ ಇದೆ. ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಸಧ್ಯಕ್ಕೆ ಬಂಗಾಳಕೊಲ್ಲಿಯಲ್ಲಾಗಲಿ ಅರಬ್ಬಿ ಸಮುದ್ರದಲ್ಲಾಗಲಿ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ. 

16 July 2023

17.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ದಿನಕ್ಕೆ ಎರಡು ಮಳೆಯ ಮುನ್ಸೂಚನೆ ಇದೆ.

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಮೋಡದ ಜೋತೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡು ಭಾಗಗಳಾದ ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಒಳನಾಡು ಭಾಗಗಳಲ್ಲಿ ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು 
ಕರಾವಳಿ ಭಾಗಗಳಲ್ಲಿ ಜುಲೈ 17ರಿಂದ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಜುಲೈ 19ರಿಂದ ಮಳೆ ಜೋರಾಗುವ ಮುನ್ಸೂಚನೆ ಇದೆ. 
ಈ ಸಮಯದಲ್ಲಿ ಉತ್ತರ ಒಳನಾಡು ಭಾಗಗಳಲ್ಲಿ ಸಹ ಆಶಾದಾಯಕ ಬೆಳವಣಿಗೆಯಾಗಲಿದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

15 July 2023

16.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ ಉಳಿದ ಭಾಗಗಳಲ್ಲಿ ಮೋಡ ಒಂದೆರಡು ಮಳೆ ಬೀಳುವ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಕರಾವಳಿಯಲ್ಲಿ ಜುಲೈ 18ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕಾಗುವ ಲಕ್ಷಣಗಳಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಾಗುತ್ತಿದೆ. ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮುಂಗಾರು ಕೊರತೆ ಹೆಚ್ಚು ಕಾಡುವ ಲಕ್ಷಣಗಳಿವೆ. ಅನಿರೀಕ್ಷಿತ ಮಳೆಯ ನಿರೀಕ್ಷೆಯಲ್ಲಿ ಇರಬೇಕಾಗಿದೆ. 

14 July 2023

15.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಉತ್ತರ ಒಳನಾಡು ಭಾಗಗಳಲ್ಲಿ ಮುಂಗಾರು ಬಲಗೊಳ್ಳುವ ಲಕ್ಷಣಗಳಿಲ್ಲ. ಅನಿರೀಕ್ಷಿತ ಮಳೆಯ ನಿರೀಕ್ಷೆಯಲ್ಲಿ ಇರಬೇಕಾಗಿದೆ. 

ಕರಾವಳಿಯಲ್ಲಿ ಜುಲೈ 18 ಅಥವಾ 19ರಿಂದ ಸ್ವಲ್ಪ ಚುರುಕಾಗುವ ಲಕ್ಷಣಗಳಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 

13 July 2023

14.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು ಅಲ್ಲಲ್ಲಿ, ಮಂಡ್ಯ, ಚಾಮರಾಜನಗರ (ಬಿಳಿಗಿರಿ ರಂಗನ ಬೆಟ್ಟ, ಮಲೈಮಾದೇಶ್ವರ ಬೆಟ್ಟದ ಸುತ್ತಮುತ್ತ), ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾಸನ, ಹಾವೇರಿ, ಧಾರವಾಡ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರಿಂದ ಮಳೆ ಗಣನೀಯವಾಗಿ ಕಡಿಮೆಯಾಗುವ ಲಕ್ಷಣಗಳಿದ್ದು, ಜುಲೈ 18ರಿಂದ ಮತ್ತೆ ಚುರುಕಾಗುವ ಸಾಧ್ಯತೆ ಇದೆ. 

ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಲಕ್ಷಣಗಳು ಕಾಣುತ್ತಿಲ್ಲ ಜುಲೈ 16ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ತೀರಾ ಕಡಿಮೆಯಾಗುವ ಲಕ್ಷಣಗಳಿವೆ. 

12 July 2023

13.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಗುಡುಗು ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಸನ ಹಾಗೂ ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ದುರ್ಬಲ ಮುಂಗಾರು ಮುಂದುವರಿಯಲಿದ್ದು, ಜುಲೈ 15ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಒಳನಾಡು ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...