03.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕರಾವಳಿಗೆ ಹೊಂದಿಕೊಂಡಿರುವ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು, ರಾಮನಗರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಗದಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಚುರುಕುಗೊಳ್ಳುತ್ತಿದ್ದು ಜುಲೈ 4 ಹಾಗೂ 5ರಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
No comments:
Post a Comment