07 July 2023

08.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ದಕ್ಷಿಣ ಒಳನಾಡು ಕಡೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಕರಾವಳಿಯಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ ಜುಲೈ 9ರ ನಂತರ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 


No comments:

Post a Comment