12 July 2023

13.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಗುಡುಗು ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಸನ ಹಾಗೂ ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ದುರ್ಬಲ ಮುಂಗಾರು ಮುಂದುವರಿಯಲಿದ್ದು, ಜುಲೈ 15ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಒಳನಾಡು ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. 

No comments:

Post a Comment