Advertise

13 July 2023

14.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು ಅಲ್ಲಲ್ಲಿ, ಮಂಡ್ಯ, ಚಾಮರಾಜನಗರ (ಬಿಳಿಗಿರಿ ರಂಗನ ಬೆಟ್ಟ, ಮಲೈಮಾದೇಶ್ವರ ಬೆಟ್ಟದ ಸುತ್ತಮುತ್ತ), ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾಸನ, ಹಾವೇರಿ, ಧಾರವಾಡ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರಿಂದ ಮಳೆ ಗಣನೀಯವಾಗಿ ಕಡಿಮೆಯಾಗುವ ಲಕ್ಷಣಗಳಿದ್ದು, ಜುಲೈ 18ರಿಂದ ಮತ್ತೆ ಚುರುಕಾಗುವ ಸಾಧ್ಯತೆ ಇದೆ. 

ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಲಕ್ಷಣಗಳು ಕಾಣುತ್ತಿಲ್ಲ ಜುಲೈ 16ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ತೀರಾ ಕಡಿಮೆಯಾಗುವ ಲಕ್ಷಣಗಳಿವೆ. 

1 comment:

  1. ಹಗಲು ಬಿಸಿಲು ಬಂದು
    ರಾತ್ರಿ ಮಳೆ ಬರುವ ಹಾಗೆ ಮಾಡಿ ಶೇಖರಣ್ಣಾ,,
    ಮದ್ದು ಬಿಟ್ಟಾಗಲಿಲ್ಲ,,😢😢

    ReplyDelete

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ...