Advertise

15 July 2023

16.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ ಉಳಿದ ಭಾಗಗಳಲ್ಲಿ ಮೋಡ ಒಂದೆರಡು ಮಳೆ ಬೀಳುವ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಕರಾವಳಿಯಲ್ಲಿ ಜುಲೈ 18ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕಾಗುವ ಲಕ್ಷಣಗಳಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಾಗುತ್ತಿದೆ. ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮುಂಗಾರು ಕೊರತೆ ಹೆಚ್ಚು ಕಾಡುವ ಲಕ್ಷಣಗಳಿವೆ. ಅನಿರೀಕ್ಷಿತ ಮಳೆಯ ನಿರೀಕ್ಷೆಯಲ್ಲಿ ಇರಬೇಕಾಗಿದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...