Advertise

17 July 2023

18.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರದ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು, ಮೋಡ ಒಂದೆರಡು ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಜುಲೈ 19ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಚುರುಕಾಗುವ ಲಕ್ಷಣಗಳಿದ್ದು, ಜುಲೈ 20ರಿಂದ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿಯೂ ಮುಂಗಾರು ಸ್ವಲ್ಪ ಬಲಗೊಳ್ಳುವ ಸಾಧ್ಯತೆ ಇದೆ. ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಸಧ್ಯಕ್ಕೆ ಬಂಗಾಳಕೊಲ್ಲಿಯಲ್ಲಾಗಲಿ ಅರಬ್ಬಿ ಸಮುದ್ರದಲ್ಲಾಗಲಿ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...