19 July 2023

20.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ಸಾಧ್ಯತೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಹಾಸನ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಚುರುಕಾಗಿದ್ದು, ಕರಾವಳಿಯಲ್ಲಿ ಗಾಳಿಯ ಪ್ರಭಾವದಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಲಕ್ಷಣಗಳಿಲ್ಲ. ಜುಲೈ 23ರಿಂದ ರಾಜ್ಯದಾದ್ಯಂತ ಮುಂಗಾರು ತನ್ನ ಪ್ರಭಾವ ಬೀರುವ ಲಕ್ಷಣಗಳಿವೆ. ಉತ್ತಮ ಮಳೆಯ ನಿರೀಕ್ಷೆ ಇದೆ.
ಸಧ್ಯಕ್ಕೆ ಯಾವುದೇ ರೀತಿಯ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿಲ್ಲ. 

No comments:

Post a Comment