Advertise

20 July 2023

21.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ಗಾಳಿಯ ಪ್ರಭಾವದಿಂದ ಮೋಡವಿದ್ದರೂ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ 
ಕಲಬುರ್ಗಿ, ಬೀದರ್ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 


ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡರೂ, ಮೋಡವಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇದರ ಪರಿಣಾಮದಿಂದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. 



No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...