Advertise

22 July 2023

23.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. 
ಗಾಳಿಯ ಪ್ರಭಾವ ಕಡಿಮೆಯಾಗಿದ್ದರಿಂದ ಮಳೆ ಹೆಚ್ಚಾಗಬಹುದು. 

ಕೊಡಗು (ಉತ್ತಮ) , ಚಿಕ್ಕಮಗಳೂರು, ಶಿವಮೊಗ್ಗ ಸಹ ಮಳೆಯ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮಳೆ ಹೆಚ್ಚಿರುವುದರಿಂದ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆ. 

ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಾಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಜುಲೈ 26ರ ತನಕ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಲಿದ್ದು 28ರಿಂದ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...