Advertise

24 July 2023

25.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.

ಇವತ್ತಿನಿಂದ ಜುಲೈ 27ರ ತನಕ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ, ಕೆಲವು ಭಾಗಗಳಲ್ಲಿ ತುಂತುರು ಮಳೆ ಇರಬಹುದು. 

ಮುಂಗಾರು ಗರಿಷ್ಠ ಪ್ರಮಾಣದಲ್ಲಿದ್ದು ಜುಲೈ 27ರ ತನಕ ರಾಜ್ಯದಾದ್ಯಂತ ಉತ್ತಮ ಮಳೆಯ ನಿರೀಕ್ಷೆ ಇದೆ. 28ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿಯಲ್ಲಿ ಮತ್ತೆರಡು ದಿನಗಳ ಕಾಲ ಸಾಮಾನ್ಯ ಮಳೆಯ ಲಕ್ಷಣಗಳಿವೆ. 
ಜುಲೈ 31 ಅಥವಾ ಆಗಷ್ಟ್ 1ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ...