Advertise

27 July 2023

28.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. 
ಕೊಡಗು ಒಂದೆರಡು ಕಡೆ ಸಾಮಾನ್ಯ ಮಳೆಯ ಇದ್ದರೆ ಹೆಚ್ಚಿನ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕಲಬುರ್ಗಿ, ಯಾದಗಿರಿ (red alert), ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲಗೊಳ್ಳುತ್ತಿದ್ದು, ಜುಲೈ 28ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಲಿದೆ. ಜುಲೈ 30ರ ನಂತರ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...