Advertise

28 July 2023

29.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಅಲ್ಲಲ್ಲಿ ಆಗಾಗ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ತುಂತುರು ಮಳೆ ಜಾಸ್ತಿ ಇರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲಗೊಂಡಿದ್ದು, ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕುಸಿದಿದೆ. ಕರಾವಳಿ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದ್ದರೂ
ಜುಲೈ 30,31ರ ನಂತರ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...