Advertise

29 July 2023

30.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

30.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಹೆಚ್ಚಿರಬಹುದು. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಹ ಒಂದೆರಡು ಮಳೆ ಹೆಚ್ಚಿರಬಹುದು. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 


ಮುಂಗಾರು ದುರ್ಬಲವಾಗಿದ್ದು, ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ತೀರಾ ಕಡಿಮೆ. ಕರಾವಳಿ ಭಾಗಗಳಲ್ಲಿ ಆಗಷ್ಟ್ 6ರ ತನಕ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. (ಅಧಿಕ ಪ್ರಮಾಣದಲ್ಲಿ ಔಷಧಿ ತಯಾರಿಕೆ ಬೇಡ. ಅಗತ್ಯಕ್ಕೆ ತಕ್ಕ ತಯಾರಿಕೆ ಸಾಕು) 

No comments:

Post a Comment

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ...