Advertise

31 August 2023

01.09.2023 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಆಗಾಗ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ವಾತಾವರಣದ ಅಧಿಕ ತಾಪಮಾನದ ಕಾರಣದಿಂದ ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಸೆಪ್ಟೆಂಬರ್ 4 ರಿಂದ ಕಾಸರಗೋಡು ಹಾಗೂ 6ರ ನಂತರ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ಈಗಿನ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮಳೆಯ ವಾತಾವರಣವು ಮುಂದುವರಿಯುವ ಲಕ್ಷಣಗಳಿವೆ. 
ಆದರೂ ಮುನ್ಸೂಚನಾ ನಕ್ಷೆಯಲ್ಲಿ ತೋರಿಸಿದಂತೆ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲ 


30 August 2023

31.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು - ದಕ್ಷಿಣ ಕನ್ನಡ ಗಡಿ ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಕರಾವಳಿ ತೀರ ಭಾಗಗಳ ಒಂದೆರಡು ಕಡೆ, ಉತ್ತರ ಕನ್ನಡ ಕರಾವಳಿ ತೀರ ಭಾಗಗಳನ್ನು ಹೊರತು ಪಡಿಸಿ ಉಳಿದ ಕಡೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. 

ಹಾಸನ ಹಾಗೂ ಚಿಕ್ಕಬಳ್ಳಾಪುರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಪಾವಗಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಬೆಂಗಳೂರು, ಕೋಲಾರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಂಡ್ಯ, ಚಾಮರಾಜನಗರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಇವತ್ತಿನಿಂದ ರಾಜ್ಯದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಅಧಿಕ ತಾಪಮಾನದ ಕಾರಣದಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಸೆಪ್ಟೆಂಬರ್ 6ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿಯಲ್ಲಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. 

29 August 2023

30.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಹಾಸನ, ಚಾಮರಾಜನಗರ( ಬಿಳಿಗಿರಿ ರಂಗನ ಬೆಟ್ಟದ ಸುತ್ತಮುತ್ತ ಹಾಗೂ ಗುಂಡ್ಲುಪೇಟೆ), ಕೋಲಾರ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ  ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ವಾತಾವರಣದ ಅಧಿಕ ತಾಪಮಾನದಿಂದಾಗಿ ಆಗಷ್ಟ್ 30ರಿಂದ ಮಲೆನಾಡು ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನ ಈ ಮಳೆಯ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. 
ವಿಶೇಷವಾಗಿ ಒಳನಾಡು ಭಾಗಗಳಿಗೆ ಹೋಲಿಸಿದರೆ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಮುನ್ಸೂಚನೆ ಇದೆ. 


28 August 2023

29.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಆಗಾಗ ಮೋಡದ ವಾತಾವರಣ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಈಗಿನ ಮುನ್ಸೂಚನೆಯಂತೆ ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 6ರಿಂದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ದಿನ ಬಿಟ್ಟು ದಿನ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ. 

27 August 2023

28.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು(ದಕ್ಷಿಣ), ಹಾಸನ, ಮೈಸೂರು (ಉತ್ತರ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಚುರುಕಾಗುವ ಲಕ್ಷಣಗಳು ಕಾಣುತ್ತಿಲ್ಲ. ಆದರೂ ಸೆಪ್ಟೆಂಬರ್ 4ರಿಂದ ಕರಾವಳಿ ತೀರದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 


26 August 2023

27.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡ - ಕಾಸರಗೋಡು ಗಡಿ ಭಾಗಗಳಲ್ಲಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಧಾರವಾಡ, ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 31ರ ತನಕ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 


25 August 2023

26.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಆಗುಂಬೆ ಹಾಗೂ ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಹೆಚ್ಚಿದೆ. 

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಈಗಿನ ಪ್ರಕಾರ ಸೆಪ್ಟೆಂಬರ್ 3ನೇ ವಾರದಲ್ಲಿ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಬಹುದು. ಒಕ್ಟೊಬರ್ 2ನೇ ವಾರದಲ್ಲಿ ಹಿಂಗಾರು ಮಳೆಯ ಪ್ರವೇಶದ ಲಕ್ಷಣಗಳಿವೆ. ಜನವರಿಯ ಮಧ್ಯ ಅಥವಾ ಕೊನೇಯ ತನಕವೂ ಹಿಂಗಾರು ಮುಂದುವರಿಯುವ ಸಾಧ್ಯತೆ ಇದೆ. ಒಂದು ಮಾಹಿತಿಯಂತೆ ಹಿಂಗಾರು ಸಹ ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆ ತೋರುತ್ತಿದೆ. 

23 August 2023

24.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಆಗಾಗ್ಗೆ ಸ್ವಲ್ಪ ಮೋಡವಿದ್ದರೂ ಮಳೆಯ ಲಕ್ಷಣಗಳಿಲ್ಲ. 

ಭಾರತದ ಪೂರ್ವ ಭಾಗಗಳಲ್ಲಿ ಮಾತ್ರ ಉತ್ತಮ ಮಳೆಯಾಗುತ್ತಿದೆ.

ಈಗಿನ ಮುನ್ಸೂಚನೆಯಂತೆ ವಾತಾವರಣದ ಅಧಿಕ ತಾಪಮಾನದಿಂದಾಗಿ ಆಗಷ್ಟ್ 26ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 

ಮುಂಗಾರು ತೀರಾ ದುರ್ಬಲಗೊಂಡಿದ್ದರಿಂದ ಕರಾವಳಿ ಭಾಗಗಳಲ್ಲಿ ಪಶ್ಚಿಮದ ಮಳೆ ಕೊರತೆಯಾಗಲಿದೆ. ಪೂರ್ವದ ಮಳೆ ಅಂದರೆ ಹಿಂಗಾರು ರೀತಿಯ ಮಳೆಗೆ ಇನ್ನೂ ಸಮಯವಿರುವುದರಿಂದ ನೀರಿನ ಸಮಸ್ಯೆ ತಲೆದೋರರುವ ಲಕ್ಷಣಗಳಿವೆ. 

ಕರಾವಳಿ ಮಾತ್ರವಲ್ಲದೇ ರಾಜ್ಯದಾದ್ಯಂತ ಮುಂಗಾರಿನ ತೀವ್ರ ಕೊರತೆ ಉಂಟಾಗಿದೆ. ನೀರಿನ ಮಿತಬಳಕೆಯ ಆವಶ್ಯಕತೆ ಇದೆ



22 August 2023

23.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

23.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. 
ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ತೀರಾ ದುರ್ಬಲಗೊಂಡಿದ್ದು ವಾತಾವರಣದ ಉಷ್ಣಾಂಶ ಏರಿಕೆಯಿಂದಾಗಿ ಆಗಷ್ಟ್ 31ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ(ಹಿಂಗಾರು ರೀತಿಯ ಪೂರ್ವದ ಮೋಡ) ಮಳೆಯ ಮುನ್ಸೂಚನೆ ಇದೆ. 

20 August 2023

21.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡ - ಕಾಸರಗೋಡು ಗಡಿ ಭಾಗಗಳ ಸುತ್ತಮುತ್ತ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿಯೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಮಳೆಯ ತೀವ್ರತೆಯೂ ಇಳಿಕಯಾಗಿ ಆಗಷ್ಟ್ 21ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮತ್ತಷ್ಟು ಕಡಿಮೆಯಾಗಿ ಮೋಡ ಅಥವಾ ತುಂತುರಿಗಷ್ಟೇ ಸೀಮಿತಗೊಳ್ಳುವ ಲಕ್ಷಣಗಳಿವೆ. ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಲಕ್ಷಣಗಳಿವೆ. 


19 August 2023

20.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಆಗಷ್ಟ್ 21ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

18 August 2023

19.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು ಆಗಷ್ಟ್ 21ರಿಂದ ಕರಾವಳಿಯಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ. 

17 August 2023

18.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಕಾಸರಗೋಡು ಗಡಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.(ಗುಡುಗು ಸಾಧ್ಯತೆಯೂ ಇದೆ). ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಬೆಂಗಳೂರು, ತುಮಕೂರು, ಹಾಸನ, ರಾಮನಗರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಗುಡುಗು ಸಾಧ್ಯತೆಯೂ ಇದೆ) 

ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ,  ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬೀದರ್ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆಗಳಲ್ಲಿಯೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 18 ಹಾಗೂ 19ರಂದು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಆಗಷ್ಟ್ 21ರ ನಂತರ ರಾಜ್ಯದಾದ್ಯಂತ ಮತ್ತೆ ಒಣ ಹವೆ ಮುಂದುವರಿಯುವ ಲಕ್ಷಣಗಳಿವೆ. 




16 August 2023

16.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿಯ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಉತ್ತರ ಕನ್ನಡ ಹಾಗೂ ಉಡುಪಿ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಗದಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಭಾಗಗಳಲ್ಲಿ ಒಂದೆರಡು ಸೀಮಿತ ಪ್ರದೇಶದಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 18ರಿಂದ 21ರ ತನಕ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ನಂತರ ಮತ್ತೆ ಒಣ ಹವೆ ಮುಂದುವರಿಯಲಿದೆ. 


15 August 2023

16.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಳ್ಳಾರಿ - ಗದಗ ಹಾಗೂ ಬಳ್ಳಾರಿ - ಕೊಪ್ಪಳ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 


ಈಗಿನ ಮುನ್ಸೂಚನೆಯಂತೆ ಆಗಷ್ಟ್ 17 ರಿಂದ 20ರ ತನಕ ರಾಜ್ಯದ ಕರಾವಳಿ ಭಾಗಗಳ ಅಲ್ಲಲ್ಲಿ ಹಾಗೂ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
21ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. 


13 August 2023

14.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
 
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ - ಕಾಸರಗೋಡು ಗಡಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಹಾಸನ ಜಿಲ್ಲೆಯ ಹಾಸನ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ, ಗದಗ, ಬಾಗಲಕೋಟೆ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 18ರಿಂದ ಉತ್ತರ ಕನ್ನಡ ಕರಾವಳಿ ಹಾಗೂ ಆಗಷ್ಟ್ 19ರಿಂದ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ  ಮಳೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. 

12 August 2023

13.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡದ ವಾತಾವರಣದೊಂದಿಗೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದೊಂದಿಗೆ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ತೀರಾ ದುರ್ಬಲತೆ ಮುಂದುವರಿಯಲಿದೆ. ಆಗಷ್ಟ್ 18ರ ನಂತರ ರಾಜ್ಯದ ಉತ್ತರ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಪ್ರಾರಂಭವಾಗುವ ಲಕ್ಷಣಗಳಿವೆ

11 August 2023

12.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಉಳಿದ ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ಬೀದರ್ ಜಿಲ್ಲೆಗಳಲ್ಲಿ ಮೋಡ ಹಾಗೂ ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ತೀರಾ ದುರ್ಬಲತೆ ಮುಂದುವರಿಯಲಿದೆ. ಇನ್ನೆರಡು ದಿನಗಳಲ್ಲಿ ರಾಜ್ಯದಾದ್ಯಂತ ಈಗಿನ ಗುಡುಗು ಸಹಿತ ಮಳೆಯ ವಾತಾವರಣವು ಅಂತ್ಯಗೊಂಡು ಒಣ ಹವೆ ಮುಂದುವರಿಯುವ ಲಕ್ಷಣಗಳಿವೆ. 

10 August 2023

11.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಅನಿರೀಕ್ಷಿತ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು ಶಿವಮೊಗ್ಗ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಪಾವಗಢ, ಚಿಕ್ಕಬಳ್ಳಾಪುರ, ಕೋಲಾರ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ 

ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ತೀರಾ ದುರ್ಬಲಗೊಂಡು ವಾತಾವರಣದ ಉಷ್ಣಾಂಶ ಏರಿಕೆಯಿಂದಾಗಿ ರಾಜ್ಯದ ಅಲ್ಲಲ್ಲಿ ಸಂಜೆಯ ವೇಳೆಗೆ ಅನಿರೀಕ್ಷಿತ ಗುಡುಗು, ಸಿಡಿಲು ಸಹಿತ ಮಳೆಯ ಸಾಧ್ಯತೆ ಇದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...