Advertise

01 August 2023

02.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ದಿನದಲ್ಲಿ 2 ಅಥವಾ 3 ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು ದುರ್ಬಲತೆ ಮುಂದುವರಿಯಲಿದೆ. 
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಇವತ್ತು ತಡರಾತ್ರಿ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ವಾಯುಭಾರ ಕುಸಿತಕ್ಕೆ ಪೂರಕವಾದ ಗಾಳಿಯು ಕೇರಳ, ತಮಿಳುನಾಡು ದಕ್ಷಿಣ ತುದಿಯ ಸಮುದ್ರದ ಮೂಲಕ ಸೆಳೆಯುತ್ತಿರುವುದರಿಂದ ರಾಜ್ಯದ ಕರಾವಳಿ ಭಾಗಗಳಿಗೆ ಅಷ್ಟೇನು ಪರಿಣಾಮವಿಲ್ಲ. 
ಆದರೆ ಮೋಡಗಳು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿರುವುದರಿಂದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಅದರಲ್ಲೂ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಹೆಚ್ಚಿರುವ ಸಾಧ್ಯತೆ ಇದೆ. 
ಆಗಷ್ಟ್ 6ರ ನಂತರ ಕರಾವಳಿಯಲ್ಲಿಯೂ ಮಳೆಯ ತೀವ್ರತೆ ಇನ್ನಷ್ಟು ಕಡಿಮೆಯಾಗುವ ಲಕ್ಷಣಗಳಿವೆ. 


No comments:

Post a Comment

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್...