05.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ, ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಹೆಚ್ಚಾಗುತ್ತಿದ್ದು. ಹಿಂದೂ ಮಹಾಸಾಗರದ ಮೂಲಕ ಬೀಸುತ್ತಿರುವ ಮುಂಗಾರಿಗೆ ಹೆಚ್ಚು ಬಲಕೊಡುವ ಮಾರುತಗಳೇ ದುರ್ಬಲಗೊಂಡಿವೆ. ಇದು ತುಂಬಾ ಆತಂಕಕಾರಿ ಬೆಳವಣಿಗೆಯಾಗಿದೆ.
ಮುಂಗಾರು ಬಲಗೊಳ್ಳುವ ಸಾಧ್ಯತೆ ಕ್ಷೀಣಿಸುತ್ತಿದೆ.
No comments:
Post a Comment