06.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ.
ಆಗಷ್ಟ್ 6ರಿಂದ ಮಳೆ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಕೆಲವು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಹಾವೇರಿ, ಧಾರವಾಡ, ಬಾಗಲಕೋಟೆ ಭಾಗಗಳಲ್ಲಿ ಸಹ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ಇನ್ನಷ್ಟು ದುರ್ಬಲವಾಗುವ ಲಕ್ಷಣಗಳಿವೆ
No comments:
Post a Comment